ಮೊನ್ನೆ ಬಿಕ್ಕೆ ಗುಡ್ಡಕ್ಕೆ ಹಣ್ಣು ಹೆಕ್ಕಲು ಹೊದಾಗ ಗೌರಿ ಹೂವಿನ ಬಳ್ಳಿಯನ್ನು ಕಂಡೆ. ಅದಾಗಲೆ ಕಂಬಳಿಹುಳವೊಂದು ಎಲೆಗಳನ್ನು ತಿನ್ನುತಿತ್ತು. ಮರುದಿನ ನೋಡಿದಾಗ ಹಕ್ಕಿಯೊಂದು ಅದೇ ಕಂಬಳಿಹುಳಗಳನ್ನು ತಿನ್ನುತಿತ್ತು. ಅಂದರೆ ನಿಸರ್ಗಕ್ಕೆ ಯಾವ ಜೀವಿಗಳೂ ಅತಿಯಾಗಿ ಸಂಖ್ಯೆ ಹೆಚ್ಚಿಸಲು ಕೊಡದೆ ಸಮತೋಲನ ಕಾಪಾಡಲು ಗೊತ್ತಿದೆ ಎಂದಾಯಿತು. ಆದರೆ ಆಗ ತಾನೆ ಗೌರಿಹೂವು ಚಿಗುರಿದ್ದು ಚಿಟ್ಟೆಗೆ ಹೇಗೆ ಗೊತ್ತಾಯಿತು? ಅಲ್ಲಿಯೆ ಕಂಬಳಿಹುಳ ಹೆಚ್ಚು ಎಲೆಗಳನ್ನು ತಿನ್ನುತ್ತಿದೆ ಎಂಬುದು ಹಕ್ಕಿಗೆ ಹೇಗೆ ಗೊತ್ತಾಯಿತು? ಮಳೆಗಾಲದಲ್ಲಿ ಮಣ್ಣು ತೊಳೆದುಹೋದ ನಂತರ ಕೆಲವೇ ದಿನಗಳಲ್ಲಿ ಹೊಸ ಹುಲ್ಲು ಹುಟ್ಟುತ್ತದೆ. ಹಾಗೆಯೇ ಹೊಸ ಮಣ್ಣು ಹಾಕಿದಾಗಲೂ ಸಹ ಬಚ್ಚಲುಬಳ್ಳಿಯಂತಹ ಬಳ್ಳಿಗಳು ನಾವು ಊಹಿಸಲೂ ಸಾಧ್ಯವಿಲ್ಲದ ವೇಗದಲ್ಲಿ ಬೆಳೆಯುತ್ತವೆ. ಹಕ್ಕಿಗಳು ತಿಂದು ಬಿಸುಟಿದ ಬೀಜಗಳು ಮೊಳಕೆಯೊಡೆದು ಹೊರಬರುತ್ತವೆ. ಹಾಗಾದರೆ ಭೂಮಿಗೆ ಯಾರು ಹೇಳಿಕೊಟ್ಟಿದ್ದು ಮಣ್ಣು ತೊಳೆದು ಹೋಗಲಾಗದಂತೆ ಗಿಡ ಹುಟ್ಟಬೇಕೆಂದು? ಯಾರು ಹೇಳಿಕೊಟ್ಟಿದ್ದು ಹಕ್ಕಿಗಳು ಬೀಜ ಪ್ರಸಾರ ಮಾಡಬೇಕೆನ್ನುವುದ್ನನು? ಗದ್ದೆ ಕಟಾವಿನ ಕೆಲವೇ ದಿನಗಳ ನಂತರ ಕೀಟಹಾರಿ ಡ್ರಾಸಿರ ಗಿಡ ಹೇಗೆ ಬರುತ್ತವೆ? ಅಲ್ಲಿ ಹುಟ್ಟಿದರೆ ಮಾತ್ರ ಆಹಾರ ಸಿಗುತ್ತದೆ ಎಂದು ಡ್ರಾಸಿರಾಕ್ಕೆ ಹೇಗೆ ಗೊತ್ತು ? ಹಾಗಾದರೆ ಭೂಮಿಗೂ ಪ್ರ...
Comments
Post a Comment